In the below we have listed the famous Kannada ogatugalu with answers, these are collected from various books and social media platforms. In Karnataka, most of the ogatugalu(riddles) were originated from the village people and hence popularly known as Janapada Ogatugalu.
Here along with riddles questions you will get answers for that questions also. In the below you will see that the grey colour stripe, once you click on the button you will get riddles answers for all the questions. We hope it will helpful for our readers.
”ಒಗಟು”: ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರುಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ.
ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು ಉಪಮೇಯ. ಇಲ್ಲಿ ಉಪಮಾನ ವಾಚ್ಯವಾಗಿರುತ್ತದೆ; ಉಪಮೇಯ ಅಸ್ಪಷ್ಟವಾಗಿ ರಹಸ್ಯವಾಗಿರುತ್ತದೆ. ಅದನ್ನು ಒಗಟೆಯ ಕರ್ತೃ ಬಹಳ ಜಾಣ್ಮೆಯಿಂದ ಬಚ್ಚಿಟ್ಟಿರುತ್ತಾನೆ. ಉಪಮಾನದ ಆಧಾರದಿಂದ ಉಪಮೇಯವನ್ನು ಪತ್ತೆಮಾಡಬೇಕಾಗುತ್ತದೆ. ಇದು ಬುದ್ಧಿಶಕ್ತಿಯ ಪರೀಕ್ಷೆಗೊಂದು ಒಳ್ಳೆಯ ಒರೆಗಲ್ಲು.
- ಕಣ್ಣು
ಕಾಸಿನ ಕುದುರೆಗೆ ಬಾಲದ ಲಗಾಮು
- ಸೂಜಿ ದಾರ
ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ
ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ
- ಗಿಳಿ
ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?
ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?
- ಮೂಗು, ಬಾಯಿ
ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?
ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?
- ಮೊಟ್ಟೆ
ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?
ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?
- ಕೋಳಿ
ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?
ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?
- ರೈಲು
ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ
ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ
- ಗಡಿಯಾರ
ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ
ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ
- ಕಲ್ಲಂಗಡಿ ಹಣ್ಣು
ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ
ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ
-ತೆಂಗು
ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ
ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ
-ನೀರು
ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.
ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.
-ದಾರಿ
ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.
ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.
-ಯುಗಾದಿ
ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .
ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .
-ಬದನೆಕಾಯಿ.
ಸಾಗರ ಪುತ್ರ ,ಸಾರಿನ ಮಿತ್ರ.
ಸಾಗರ ಪುತ್ರ ,ಸಾರಿನ ಮಿತ್ರ.
-ಉಪ್ಪು
ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.
ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.
-ಅಕ್ಕಿ
ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.
ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.
-ನವಿಲು.
ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.
ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.
-ನದಿ
ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.
ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.
- ಕೋಳಿ
ಮೋಟು ಗೋಡೆ ಮೇಲೆ, ದೀಪ ಉರೀತಿದೆ.
ಮೋಟು ಗೋಡೆ ಮೇಲೆ, ದೀಪ ಉರೀತಿದೆ.
- ಮೂಗುಬೊಟ್ಟು
ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.
ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.
-ನೆರಳು
ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ
ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ
-ಗಾಣ
ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ
ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ
-ಶ್ಯಾವಿಗೆ
ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು
ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು
-ತೆಂಗಿನಕಾಯಿ
ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ
ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ
-ತಂಬೂರಿ
ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ
ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ
-ಕಪ್ಪೆ
ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ
ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ
-ಕಸಪೊರಕೆ
ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು
ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು
-ಉಪ್ಪು
ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?
ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?
-ನಕ್ಷೆ
ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.
ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.
- ಅನ್ನದ ಅಗುಳು.
ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.
ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.
-ಸಾಬೂನು.
ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.
ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.
-ಬದನೆಕಾಯಿ.
ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.
ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.
-ನೀರು
ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.
ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.
-ಎಣ್ಣೆ ದೀಪ.
ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.
ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.
-ಬಾಳೆ ಹಣ್ಣು.
ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.
ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.
-ಕನ್ನಡಿ
ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?
ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?
-ದತ್ತುರಿಯ ಮುಳ್ಳು.
ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.
ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.
-ಕಮಲ.
ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.
ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.
-ಗಿರಣಿ
ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.
ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.
-ದುಡ್ಡು.
ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.
ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.
-ಸಗಣಿ.
ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.
ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.
- ಗರಗಸ.
ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.
ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.
-ಹಲ್ಲುಪುಡಿ.
ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.
ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.
-ಗಡಿಗೆಮಜ್ಜಿಗೆ.
ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .
ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .
-ರೊಟ್ಟಿ, ದೋಸೆ
ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ
ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ
-ಬೆಂಕಿ, ಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ
ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.
ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.
-ಕಣ್ಣು.
ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.
ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.
-ಬೆಣ್ಣೆ ಉಂಡೆ.
ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.
ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.
-ಅಂಗಿ.
ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ
ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ
-ಮಲ್ಲಿಗೆ
ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ
ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ
-ಆಕಾಶ, ನಕ್ಷತ್ರ
ಸುಟ್ಟ ಹೆಣ ಮತ್ತೆ ಸುಡ್ತಾರೆ
ಸುಟ್ಟ ಹೆಣ ಮತ್ತೆ ಸುಡ್ತಾರೆ
-ಇದ್ದಿಲು
ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ
ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ
- ಬಾಳೆ ಹಣ್ಣು
ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ
ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ
- ಬಳೆ
ಒಂದು ಹಪ್ಪಳ ಊರಿಗೆಲ್ಲ ಊಟ
ಒಂದು ಹಪ್ಪಳ ಊರಿಗೆಲ್ಲ ಊಟ
– ಚಂದ್ರ
ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ
ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ
- ಹುಣಸೇಹಣ್ಣು
ನೀಲಿ ಕೆರೆಯಲಿ ಬಿಳಿ ಮೀನು
ನೀಲಿ ಕೆರೆಯಲಿ ಬಿಳಿ ಮೀನು
-ನಕ್ಷತ್ರ
ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.
ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.
-ವಾರ,ತಿಂಗಳು,ವರ್ಷ
ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ
ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ
-ಮಳೆ
ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ
ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ
-ಕೀರ್ತಿ
ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ
ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ
-ಕಣ್ಣು
ಅಕ್ಕನ ಮೇಲೆ ಛತ್ರಿ
ಅಕ್ಕನ ಮೇಲೆ ಛತ್ರಿ
- ರೆಪ್ಪೆ
ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು
ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು
-ತೆಂಗಿನ ಕಾಯಿ
ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ
ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ
-ಕಣ್ಣು
ಅಮ್ಮನ ಆಕಾಶವಾಣಿ ನಾನು
ಅಮ್ಮನ ಆಕಾಶವಾಣಿ ನಾನು
-ಮಗು
ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು
ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು
-ಈರುಳ್ಳಿ
ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ
ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ
- ಬಾಳೆಹಣ್ಣು
ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ
ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ
-ಕಣ್ಣು
ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ
ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ
-ತೆಂಗಿನ ಕಾಯಿ
ನೀನಿಲ್ಲದೆ ಊಟವಿಲ್ಲ
ನೀನಿಲ್ಲದೆ ಊಟವಿಲ್ಲ
- ಉಪ್ಪು
ಬಿಳಿ ಸರದಾರನಿಗೆ ಕರಿ ಟೋಪಿ
ಬಿಳಿ ಸರದಾರನಿಗೆ ಕರಿ ಟೋಪಿ
-ಬೆಂಕಿಕಡ್ಡಿ
ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ
ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ
– ಸೂಜಿ
ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ
ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ
-ಹೇನು ಕೂದಲು
ಕೆಂಪು ಕುದುರೆಗೆ ಲಗಾಮು, ಓಬ್ಬ ಹತ್ತುತ್ತಾನೆ , ಇನ್ನೊಬ್ಬ ಇಳಿತಾನೇ
ಕೆಂಪು ಕುದುರೆಗೆ ಲಗಾಮು, ಓಬ್ಬ ಹತ್ತುತ್ತಾನೆ , ಇನ್ನೊಬ್ಬ ಇಳಿತಾನೇ
-ಬೆಂಕಿ,ಬಾಣಲೆ, ದೋಸೆ
ಒಂದು ಮನೆಗೆ ಒಂದೇ ತೊಲೆ
ಒಂದು ಮನೆಗೆ ಒಂದೇ ತೊಲೆ
-ತಲೆ
ಕಂದ ಬಂದ ಕೊಂದ ತಂದ
ಕಂದ ಬಂದ ಕೊಂದ ತಂದ
-ಶ್ರೀ ರಾಮ ಚಂದ್ರ
ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ
ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ
-ಭೂಪಟ
ಚಿಕ್ಕಕ್ಕನಿಗೆ ಪುಕ್ಕುದ್ದ
-ಸೌಟು
ಎರಡು ಮನೆಗೆ ಒಂದೇ ದೂಲ
ಎರಡು ಮನೆಗೆ ಒಂದೇ ದೂಲ
-ಮೂಗು
ನೀರಿರೋತಾವ ನಿಲ್ಲಲೇ ಕೋಣ
ನೀರಿರೋತಾವ ನಿಲ್ಲಲೇ ಕೋಣ
-ಚಪ್ಪಲಿ
ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ
ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ
-ನೆರಳು
ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಬಾರದ ಹಣ್ಣು ಬಲು ರುಚಿ
ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಬಾರದ ಹಣ್ಣು ಬಲು ರುಚಿ
-ಮನುಷ್ಯನ ಹುಟ್ಟು ಮಗು
ಕಲ್ಲರಳಿ ಹೂವಾಗಿ, ಎಲ್ಲರಿಗೂ ಬೇಕಾಗಿ, ಮಲ್ಲಿಕಾರ್ಜುನನ ಗುಡಿಗೆ ಬೆಳಕಾಗಿ, ಬಲ್ಲವರು ಹೇಳಿ
ಕಲ್ಲರಳಿ ಹೂವಾಗಿ, ಎಲ್ಲರಿಗೂ ಬೇಕಾಗಿ, ಮಲ್ಲಿಕಾರ್ಜುನನ ಗುಡಿಗೆ ಬೆಳಕಾಗಿ, ಬಲ್ಲವರು ಹೇಳಿ
–ಸುಣ್ಣ
ಚಿಣಿಮಿನಿ ಎನ್ನುವ ಕೆರೆ, ಚಿಂತಾಮಣಿ ಎನ್ನುವ ಹಕ್ಕಿ, ಕೆರೆ ಬತ್ತಿದರೆ ಹಕ್ಕಿಗೆ ಮರಣ
ಚಿಣಿಮಿನಿ ಎನ್ನುವ ಕೆರೆ, ಚಿಂತಾಮಣಿ ಎನ್ನುವ ಹಕ್ಕಿ, ಕೆರೆ ಬತ್ತಿದರೆ ಹಕ್ಕಿಗೆ ಮರಣ
–ದೀಪ
ಹೋಗುತ್ತಾ, ಬರುತ್ತಾ ಇರುವುದು ಎರಡು,ಹೋದ ಮೇಲೆ ಬರಲಾರವು ಎರಡು
ಹೋಗುತ್ತಾ, ಬರುತ್ತಾ ಇರುವುದು ಎರಡು,ಹೋದ ಮೇಲೆ ಬರಲಾರವು ಎರಡು
-ಸಿರಿತನ-ಬಡತನ, ಪ್ರಾಣ -ಬಡತನ
ಒಂದು ಹಸ್ತಕ್ಕೆ ನೂರೆಂಟು ಬೆರಳು
ಒಂದು ಹಸ್ತಕ್ಕೆ ನೂರೆಂಟು ಬೆರಳು
-ಬಾಳೆಗೊನೆ
ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ
ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ
–ಜರಡಿ
ಎಂದರೆ ತೆರಿತಾವ, ಅಪ್ಪ ಎಂದರೆ ಮುಚ್ಚುತಾವ
ಎಂದರೆ ತೆರಿತಾವ, ಅಪ್ಪ ಎಂದರೆ ಮುಚ್ಚುತಾವ
-ಬಾಯಿ
ದಾಸ್ ಬುರುಡೆ ದೌಲಥ ಬುರುಡೆ, ಲೋಕಕ್ಕೆಲ್ಲ ಎರಡೇ ಬುರುಡೆ
ದಾಸ್ ಬುರುಡೆ ದೌಲಥ ಬುರುಡೆ, ಲೋಕಕ್ಕೆಲ್ಲ ಎರಡೇ ಬುರುಡೆ
-ಸೂರ್ಯ , ಚಂದ್ರ
ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ
ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ
–ಅಡಿಕೆ ಮರ
ಹಾರಾಡುತ್ತಿದೆ ಗಾಳಿಪತವಲ್ಲ , ಬಣ್ಣ ಮೂರಿರುವುದು ಕಾಮನಬಿಲ್ಲಲ್ಲ
-ಧ್ವಜ
ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?
ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?
-ತಾರೆಗಳು
ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?
ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?
-ಛತ್ರಿ
ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ
ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ
-ನೊಣ
ಒಂಟಿಕಾಲಿನ ಕುಂಟ. ನಾನ್ಯಾರು?
ಒಂಟಿಕಾಲಿನ ಕುಂಟ. ನಾನ್ಯಾರು?
-ಬುಗರಿ
ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ
ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ
-ಇಲಿ
ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ
ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ
-ಕಳ್ಳಿ
ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು
ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು
-ಶ್ರೀಗಂಧ
ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು
ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು
-ಪರಂಗಿ ಹಣ್ಣು
ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ
ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ
- ಜಾದಳಕಾಯಿ
ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ
ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ
-ಕಿವಿ
ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ
ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ
-ರೊಟ್ಟಿ
ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ
ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ
-ಎಲೆ ಅದಿಕೆ
ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ
ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ
-ಬಾಳೆಲೆ
ಎರಡು ಬಾವಿಗಳ ನಡುವೆಯೊಂದು ಸೇತುವೆ
ಎರಡು ಬಾವಿಗಳ ನಡುವೆಯೊಂದು ಸೇತುವೆ
-ಮೂಗು
ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ
ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ
-ಕೋಟು ಅಂಗಿ
ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು
ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು
–ವಿಷ
ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು
ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು
–ಅಡಿಕೆ , ಸುಣ್ಣ
ಹೋಗೋದು ಮುಳುಗೋದು ತರೋದು ಏನು?
ಹೋಗೋದು ಮುಳುಗೋದು ತರೋದು ಏನು?
-ಬಿಂದಿಗೆ
ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ
ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ
-ಕೋಳಿ
ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ
ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ
-ವರ್ಷ
ಗುಂಡಾಕಾರ ಮೈಯೆಲ್ಲಾ ತೂತು
ಗುಂಡಾಕಾರ ಮೈಯೆಲ್ಲಾ ತೂತು
-ದೋಸೆ
ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ
ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ
-ಚಿಮಿಣಿ
ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ
ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ
-ಆಕಾಶ ನಕ್ಷತ್ರ ಚಂದ್ರ
ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು
ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು
-ಏಲಕ್ಕಿ
ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು
ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು
-ತಾರೆ
ಲಟಪಟ ಲೇಡಿಗೆ ಒಂದೇ ಕಣ್ಣು
ಲಟಪಟ ಲೇಡಿಗೆ ಒಂದೇ ಕಣ್ಣು
-ಸೂಜಿ
ಹಸಿರು ಕೋಲಿಗೆ ಮುತ್ತಿನ ತುರಾಯಿ
-ಜೋಳದ ತೆನೆ
ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ
ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ
-ನಾಲಿಗೆ
ಸೂಜಿ ಸಣ್ಣಕಾಗೆ ಬಣ್ಣ
ಸೂಜಿ ಸಣ್ಣಕಾಗೆ ಬಣ್ಣ
–ಕೂದಲು
ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?
ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?
-ನೆನಪು
ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ
ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ
-ನುಸಿ
ಊರಿಗೆಲ್ಲ ಒಂದೇ ಕಂಬಳಿ
ಊರಿಗೆಲ್ಲ ಒಂದೇ ಕಂಬಳಿ
-ಆಕಾಶ
ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ
ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ
-ಕುಂಕುಮ
ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ
ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ
-ಬೈತಲೆ
ಒಂದು ಬತ್ತಿ ಮನೆಯೆಲ್ಲ ಬೆಳಕು
ಒಂದು ಬತ್ತಿ ಮನೆಯೆಲ್ಲ ಬೆಳಕು
-ಸೂರ್ಯ
ಕಣ್ಣಿಗೆ ಕಾಣೋದಿಲ್ಲ, ಕೈಗೆ ಸಿಗೋದಿಲ್ಲ
ಕಣ್ಣಿಗೆ ಕಾಣೋದಿಲ್ಲ, ಕೈಗೆ ಸಿಗೋದಿಲ್ಲ
–ಗಾಳಿ
ಕಣ್ಣಿಗೆ ಹತ್ತಿರ ಕಾಲಿಗೆ ದೂರ
ಕಣ್ಣಿಗೆ ಹತ್ತಿರ ಕಾಲಿಗೆ ದೂರ
-ಬೆಟ್ಟ
ಊಟಕ್ಕೆ ಮೊದಲು ನಾನು ಅಂತ ಬರುತ್ತೆ
ಊಟಕ್ಕೆ ಮೊದಲು ನಾನು ಅಂತ ಬರುತ್ತೆ
–ಬಾಳೆ ಎಲೆ , ತಟ್ಟೆ
ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ
ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ
-ಮಾವು
ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ
ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ
-ಬೆಕ್ಕು
ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ
ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ
-ಕಪ್ಪೆ
ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು
ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು
-ಸುಣ್ಣ
ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ
ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ
-ದೀಪ
ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ
ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ
-ಚಪ್ಪಲಿ
ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು
ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು
-ನದಿ
ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ
ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ
-ಮೇಡು
ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ
ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ
-ಆಕಾಶ
ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ
ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ
-ಜೋಳದ ದಂಟು
ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?
ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?
-ಸಾಲಿಗ್ರಾಮ
ಕರಿ ಹುಡುಗನಿಗೆ ಬಿಳಿ ಟೋಪಿ
–ಹೆಂಡದ ಮಡಿಕೆ
ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು
ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು
-ನಾಣ್ಯ
ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.
ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.
-ತಿಗಣೆ
ಕುದುರೆ ಬಾಲದಿಂದ ನೀರು ಕುಡಿಯುತ್ತದೆ
ಕುದುರೆ ಬಾಲದಿಂದ ನೀರು ಕುಡಿಯುತ್ತದೆ
-ಹೇನು
ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.
ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.
-ಸೀತ ಫಲ
ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.
ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.
-ಕಣ್ಣು
ಮನೆ ಮೇಲೆ ಮಲ್ಲಿಗೆ ಹೂವು.
ಮನೆ ಮೇಲೆ ಮಲ್ಲಿಗೆ ಹೂವು.
-ಮಂಜು
ಹಾರಿದರೆ ಹನುಮಂತ ಕೂಗಿದರೆ ಶಂಖ.
ಹಾರಿದರೆ ಹನುಮಂತ ಕೂಗಿದರೆ ಶಂಖ.
-ಕಪ್ಪೆ
ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.
ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.
-ಸುಣ್ಣ
ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.
ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.
-ಪೋಸ್ಟ್ ಕಾರ್ಡ್
ಬಿಳಿ ಕುದುರೆಗೆ ಹಸಿರು ಬಾಲ.
ಬಿಳಿ ಕುದುರೆಗೆ ಹಸಿರು ಬಾಲ.
-ಮೂಲಂಗಿ
ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.
ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.
-ಕುಂಕುಮ
ಬರೋದ ಕಂಡು ಕೈ ಒಡ್ತಾರೆ.
ಬರೋದ ಕಂಡು ಕೈ ಒಡ್ತಾರೆ.
-ಬಸ್
ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು
ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು
-ಹುಂಜ
ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?
ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?
-ಮೆಣಸಿನಕಾಯಿ
ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು
ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು
-ಬೆಳ್ಳುಳ್ಳಿ
ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?
ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?
-ನಕ್ಷತ್ರ
ಹಗ್ಗ ಹಾಸಿದೆ ಕೋಣ ಮಲಗಿದೆ
ಹಗ್ಗ ಹಾಸಿದೆ ಕೋಣ ಮಲಗಿದೆ
-ಕುಂಬಳಕಾಯಿ, ಬಳ್ಳಿ
ನನ್ನ ಕಂಡರೆ ಎಲ್ಲರು ಓದೀತಾರೆ
ನನ್ನ ಕಂಡರೆ ಎಲ್ಲರು ಓದೀತಾರೆ
–ಚೆಂಡು
ಹಳ್ಳಿ ಗಡಿಯಾರ, ಒಳ್ಳೆ ಆಹಾರ
ಹಳ್ಳಿ ಗಡಿಯಾರ, ಒಳ್ಳೆ ಆಹಾರ
-ಕೋಳಿ
ನೀರು ಇರುತ್ತೆ ನದಿ ಅಲ್ಲ, ಬಾಗಿಲು ಇರುತ್ತೆ ಮನೆ ಅಲ್ಲ
ನೀರು ಇರುತ್ತೆ ನದಿ ಅಲ್ಲ, ಬಾಗಿಲು ಇರುತ್ತೆ ಮನೆ ಅಲ್ಲ
-ಕಣ್ಣು.
ಬಲಗೈಯಲ್ಲಿ ಗೀತೆ ಎಡಗೈಯಲ್ಲಿ ರಾಟೆ ಹಿಡಿದಿದ್ದೆ ನಾನು ಯಾರು
ಬಲಗೈಯಲ್ಲಿ ಗೀತೆ ಎಡಗೈಯಲ್ಲಿ ರಾಟೆ ಹಿಡಿದಿದ್ದೆ ನಾನು ಯಾರು
-ಗಾಂಧೀಜಿ
ಬಾಯಲ್ಲಿ ಹಲ್ಲಿಲ್ಲ, ಮಯಲ್ಲಿ ಶಕ್ತಿ ಇಲ್ಲ , ತಲೆಯಲ್ಲಿ ಕೂದಲಿಲ್ಲ , ಆದ್ರೂ ಎಲ್ರುನ್ನು ಕಾಡತಿನಿ ನಾನ್ಯಾರು.
ಬಾಯಲ್ಲಿ ಹಲ್ಲಿಲ್ಲ, ಮಯಲ್ಲಿ ಶಕ್ತಿ ಇಲ್ಲ , ತಲೆಯಲ್ಲಿ ಕೂದಲಿಲ್ಲ , ಆದ್ರೂ ಎಲ್ರುನ್ನು ಕಾಡತಿನಿ ನಾನ್ಯಾರು.
-ಸೊಳ್ಳೆ
ಅಕ್ಷರಗಳಿದ್ದರೂ ಪುಸ್ತಕವಲ್ಲ,ಸಿಂಹವಿದ್ದರೂ ಅರಣ್ಯವಲ್ಲ,ದುಂಡಾಗಿದ್ದರೂ ಚಕ್ರವಲ್ಲ,ನಾನ್ಯಾರು.
ಅಕ್ಷರಗಳಿದ್ದರೂ ಪುಸ್ತಕವಲ್ಲ,ಸಿಂಹವಿದ್ದರೂ ಅರಣ್ಯವಲ್ಲ,ದುಂಡಾಗಿದ್ದರೂ ಚಕ್ರವಲ್ಲ,ನಾನ್ಯಾರು.
-ನಾಣ್ಯ
ಗಂಟೆ ಹೊಡೆಯುತ್ತಾನೆ ಪೂಜಾರಿ ಅಲ್ಲ, PAPER ಅರಿಯುತ್ತಾನೆ ಆದರೆ ಹುಚ್ಚುನೂ ಅಲ್ಲ, ಹಣ ಕೇಳುತ್ತಾನೆ ಭಿಕ್ಷುಕ ಅಲ್ಲ
ಗಂಟೆ ಹೊಡೆಯುತ್ತಾನೆ ಪೂಜಾರಿ ಅಲ್ಲ, PAPER ಅರಿಯುತ್ತಾನೆ ಆದರೆ ಹುಚ್ಚುನೂ ಅಲ್ಲ, ಹಣ ಕೇಳುತ್ತಾನೆ ಭಿಕ್ಷುಕ ಅಲ್ಲ
–ಕಂಡಕ್ಟರ್
ಹಿಡಿದರೆ ಹಿಡಿಯಷ್ಟು ಬಿಟ್ಟರೆ ಮನೆತುಂಬ
ಹಿಡಿದರೆ ಹಿಡಿಯಷ್ಟು ಬಿಟ್ಟರೆ ಮನೆತುಂಬ
-ದೀಪದ ಬೆಳಕು
ಕಾಲಿಲ್ಲದೆ ನಡೆಯುವುದು ಬಾಯಿಲ್ಲದೆ ನುಡಿಯುವುದು ಇದರ ಹೊಟ್ಟೆ ಹಲವಕ್ಕೆ ಮನೆಯಾಗಿರುವುದು
ಕಾಲಿಲ್ಲದೆ ನಡೆಯುವುದು ಬಾಯಿಲ್ಲದೆ ನುಡಿಯುವುದು ಇದರ ಹೊಟ್ಟೆ ಹಲವಕ್ಕೆ ಮನೆಯಾಗಿರುವುದು
-ನದಿ
ಚೋಟುದ್ದ ಹುಡುಗಿಗೆ ಮಾರುದ್ದ ಜಡೆ
ಚೋಟುದ್ದ ಹುಡುಗಿಗೆ ಮಾರುದ್ದ ಜಡೆ
– ಸೂಜಿ ದಾರ
ಊರುಂಟು ಜನರಿಲ್ಲ ನದಿಯುಂಟು ನೀರಿಲ್ಲ
ಊರುಂಟು ಜನರಿಲ್ಲ ನದಿಯುಂಟು ನೀರಿಲ್ಲ
– ಭೂಪಟ.
ಚಿಕ್ಕ ಬೋರನಿಗೆ ಬಾಲದಲ್ಲಿ ಕತ್ತಿ
ಚಿಕ್ಕ ಬೋರನಿಗೆ ಬಾಲದಲ್ಲಿ ಕತ್ತಿ
-ಹುರಳಿಕಾಯಿ
ಬಿಳಿಯ ಹೊಲದಲ್ಲಿ ಕರಿ ಕಾಳು ಕೈಯಲ್ಲಿ ಬಿತ್ತುತ್ತಾರೆ ಬಾಯಲ್ಲಿ ಏತ್ತುತ್ತಾರೆ ನಾನು ಯಾರು
ಬಿಳಿಯ ಹೊಲದಲ್ಲಿ ಕರಿ ಕಾಳು ಕೈಯಲ್ಲಿ ಬಿತ್ತುತ್ತಾರೆ ಬಾಯಲ್ಲಿ ಏತ್ತುತ್ತಾರೆ ನಾನು ಯಾರು
-ಪುಸ್ತಕ ಮತ್ತು ಅಕ್ಷರಗಳು
ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು?
ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು?
-ಭಾರತ
ನಾಲ್ಕು ಕಂಬಗಳುಂಟು ದೇವಾಲಯವಲ್ಲ; ಎರಡು ಮೊರಗಳುಂಟು ಕೇರಲಾಗುವುದಿಲ್ಲ; ಒಂದು ಕಹಳೆಯುಂಟು ಊದಲಾಗುವುದಿಲ್ಲ; ಹಾಗಾದರೆ ನಾನು ಯಾರು?
ನಾಲ್ಕು ಕಂಬಗಳುಂಟು ದೇವಾಲಯವಲ್ಲ; ಎರಡು ಮೊರಗಳುಂಟು ಕೇರಲಾಗುವುದಿಲ್ಲ; ಒಂದು ಕಹಳೆಯುಂಟು ಊದಲಾಗುವುದಿಲ್ಲ; ಹಾಗಾದರೆ ನಾನು ಯಾರು?
-ಆನೆ
ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು?
ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು?
-ಭಾರತ
ಕರಿ ಕಂಬ್ಳಿ ನೆಂಟ, ಸರೊತ್ತಿನಲ್ಲಿ ಹೊಂಟ, ಅವನ್ಯಾರು?
ಕರಿ ಕಂಬ್ಳಿ ನೆಂಟ, ಸರೊತ್ತಿನಲ್ಲಿ ಹೊಂಟ, ಅವನ್ಯಾರು?
-ಹೆಗ್ಗಣ
ರಾಮನಂತ ಸಮುದ್ರ ರತ್ನದಂತ ಮೀನು ನೀರು ಬತ್ತಿಹೋದ್ರೆ ಮೀನು ಸತ್ತು ಹೋಗುತ್ತೆ
ರಾಮನಂತ ಸಮುದ್ರ ರತ್ನದಂತ ಮೀನು ನೀರು ಬತ್ತಿಹೋದ್ರೆ ಮೀನು ಸತ್ತು ಹೋಗುತ್ತೆ
-ದೀಪ / ಹಣತೆ
ಕಲ್ಲರಳಿ ಹೂವಾಗಿ, ಎಲ್ಲರಿಗು ಬೇಕಾಗಿ,. ಮಲ್ಲಿಕಾರ್ಜುನನ ಶಿಖರಕ್ಕೆ ಬೆಳಕಾಗಿ. ಬಲ್ಲವರು ಹೇಳಿ ಸರ್ವಜ್ಞ”
ಕಲ್ಲರಳಿ ಹೂವಾಗಿ, ಎಲ್ಲರಿಗು ಬೇಕಾಗಿ,. ಮಲ್ಲಿಕಾರ್ಜುನನ ಶಿಖರಕ್ಕೆ ಬೆಳಕಾಗಿ. ಬಲ್ಲವರು ಹೇಳಿ ಸರ್ವಜ್ಞ”
-ಸುಣ್ಣದ ಕಲ್ಲು!
100+ ಒಗಟುಗಳು [Kannada Ogatugalu | Kannada Riddles]
Reviewed by RK
on
ಜೂನ್ 18, 2021
Rating:
ಕಾಮೆಂಟ್‌ಗಳಿಲ್ಲ: