ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು [Attitta Nodadiru Atthu Horaladadiru]

ರಚನೆ: ಸಂತ ಶಿಶುನಾಳ ಷರೀಫ್

ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೆ
ಜೋ ಜೋಜೋ ಜೋ, ಜೋ ಜೋಜೋ ಜೋ||

ಸುತ್ತಿ ಹೊರಳಾಡದಿರು, ಮತ್ತೆ ಹಠ ಹೂಡದಿರು
ನಿದ್ದೆ ಬರುವಳು ಕದ್ದು ಮಲಗು ಮಗುವೆ
ಜೋ ಜೋಜೋ ಜೋ, ಜೋ ಜೋಜೋ ಜೋ||

ಮಲಗು ಚೆಲ್ವಿನ ತೆರೆಯೆ, ಮಲಗು ಒಲ್ಮೆಯ ಸೆರೆಯೇ,
ಮಲಗು ತೊಟ್ಟಿಲ ಸಿರಿಯೆ, ದೇವರಂತೆ|
ಮಲಗು ಮುದ್ದಿನ ಗಿಣಿಯೆ, ಮಲಗು ಮುತ್ತಿನ ಮಣಿಯೆ,
ಮಲಗು ಚಂದಿರನೂರ ಹೋಗುವೆಯಂತೆ||
ಮಲಗು ಚಂದಿರನೂರ ಹೋಗುವೆಯಂತೆ||
ಮಲಗು ಚಂದಿರನೂರ ಹೋಗುವೆಯಂತೆ||

ತಾರೆಗಳ ಜರತಾರಿ ಅಂಗಿ ತೊಡಿಸುವರಂತೆ
ಚಂದಿರನ ತಂಗಿಯರು ನಿನ್ನ ಕರೆದು|
ಹೂವ ಮುಡಿಸುವರಂತೆ, ಹಾಲ ಕುಡಿಸುವರಂತೆ,
ವೀಣೆ ನುಡಿಸುವರಂತೆ, ಸುತ್ತ ನೆರೆದು||
ವೀಣೆ ನುಡಿಸುವರಂತೆ, ಸುತ್ತ ನೆರೆದು||

ಬಣ್ಣ ಬಣ್ಣದ ಕನಸು ಕರಗುವುದು ಬಲುಬೇಗ
ಹಗಲು ಬರುವನು ಬೆಳ್ಳಿ ಮುಗಿಲ ನಡುವೆ|
ಚಿನ್ನದಂಬಾರಿಯಲಿ ನಿನ್ನ ಕಳುಹುವರಾಗ..
ಪಟ್ಟದಾನೆಯ ಮೇಲೆ ಪುಟ್ಟ ಮಗುವೆ||
ಪಟ್ಟದಾನೆಯ ಮೇಲೆ ಪುಟ್ಟ ಮಗುವೆ||

ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೆ|
ಜೋ ಜೋಜೋ ಜೋ ಜೋ ಜೋಜೋ ಜೋ
ಜೋ ಜೋಜೋ ಜೋ ಜೋ ಜೋಜೋ ಜೋ||
ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು [Attitta Nodadiru Atthu Horaladadiru] ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು [Attitta Nodadiru Atthu Horaladadiru] Reviewed by RK on ಆಗಸ್ಟ್ 13, 2021 Rating: 5

1 ಕಾಮೆಂಟ್‌:

  1. This will allow you to play the slot machine for longer intervals of time and might maximize your gaming expertise. If you're going with a finances in mind, buy-a-pays and progressive machines aren't your finest wager, literally. Video games are far and away the most well-liked slot as of late. That's as a result of|as a end result of} they provide bonus rounds, scatter pays and special occasions fairly often. If you'd 우리카지노 wish to take a stab at this world, wikiHow has sources for that, too. For certain variations of games, the methodology is spelled out on the glass above the display.

    ಪ್ರತ್ಯುತ್ತರಅಳಿಸಿ

Submit Your Joke

ಹೆಸರು

ಇಮೇಲ್ *

ಸಂದೇಶ *

Blogger ನಿಂದ ಸಾಮರ್ಥ್ಯಹೊಂದಿದೆ.