ದೀಪವು ನಿನ್ನದೇ ಗಾಳಿಯು ನಿನ್ನದೇ [Deepavu Ninnade, Gaaliyu Ninnade]

ರಚನೆ: ಡಾ. ಕೆ.ಎಸ್. ನರಸಿಂಹಸ್ವಾಮಿ

ದೀಪವು ನಿನ್ನದೆ, ಗಾಳಿಯು ನಿನ್ನದೆ, ಆರದಿರಲಿ ಬೆಳಕು
ಕಡಲು ನಿನ್ನದೆ, ಹಡಗು ನಿನ್ನದೆ, ಮುಳುಗದಿರಲಿ ಬದುಕು

ಬೆಟ್ಟವು ನಿನ್ನದೆ, ಬಯಲು ನಿನ್ನದೆ, ಹಬ್ಬಿ ನಗಲಿ ಪ್ರೀತಿ
ನೆರಳು, ಬಿಸಿಲು ಎಲ್ಲವೂ ನಿನ್ನವೆ ಇರಲಿ ಏಕರೀತಿ

ಆಗೊಂದು ಸಿಡಿಲು, ಈಗೊಂದು ಮುಗಿಲು, ನಿನಗೆ ಅಲಂಕಾರ
ಅಲ್ಲೊಂದು ಒಂದು ಹಕ್ಕಿ, ಇಲ್ಲೊಂದು ಮುಗುಳು ನಿನಗೆ ನಮಸ್ಕಾರ
ಕಡಲು ನಿನ್ನದೆ, ಹಡುಗು ನಿನ್ನದೆ, ಮುಳುಗದಿರಲಿ ಬದುಕು

ಅಲ್ಲಿ ರಣ ದುಂದುಭಿ, ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ,
ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ

ದೀಪವು ನಿನ್ನದೆ, ಗಾಳಿಯು ನಿನ್ನದೆ, ಆರದಿರಲಿ ಬೆಳಕು
ಕಡಲು ನಿನ್ನದೆ, ಹಡಗು ನಿನ್ನದೆ, ಮುಳುಗದಿರಲಿ ಬದುಕು

Translation:

Lamp is yours, wind is also yours, hope this light not go away
Sea is yours, ship is yours, hope this life does not sink

Mountain is yours, field is yours, let love spread and smile
Let your shade and sunlight be uniform

A lightening over there, sky over here, to decorate you
A bird over there, a flower bud over here, are prayers to you

Sea is yours, ship is yours, hope this life does not sink

A war slogan over there, sound of veena here, are both your echo
That great epic, this thoughtful poem, are both your voices

Lamp is yours, wind is yours, hope this light does not go away
Sea is yours, ship is yours, hope this life does not sink
ದೀಪವು ನಿನ್ನದೇ ಗಾಳಿಯು ನಿನ್ನದೇ [Deepavu Ninnade, Gaaliyu Ninnade] ದೀಪವು ನಿನ್ನದೇ ಗಾಳಿಯು ನಿನ್ನದೇ [Deepavu Ninnade, Gaaliyu Ninnade] Reviewed by RK on ಆಗಸ್ಟ್ 13, 2021 Rating: 5

ಕಾಮೆಂಟ್‌ಗಳಿಲ್ಲ:

Submit Your Joke

ಹೆಸರು

ಇಮೇಲ್ *

ಸಂದೇಶ *

Blogger ನಿಂದ ಸಾಮರ್ಥ್ಯಹೊಂದಿದೆ.