ರಚನೆ: ಜಿ ಎಸ್ ಶಿವರುದ್ರಪ್ಪ
ಎಲ್ಲೋ ಹುಡುಕಿದೆ ಇಲ್ಲದ ದೇವರ
ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಮ್ಮೊಳಗೆ
ಎಲ್ಲಿದೆ ನಂದನ ಎಲ್ಲಿದೆ ಬಂಧನ
ಎಲ್ಲಾ ಇವೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಗೆಗೆ
ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆ ಎಂಬುದು
ನಾಲ್ಕು ದಿನದ ಈ ಬದುಕಿನಲಿ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಮ್ಮೊಳಗೆ
ಎಲ್ಲಿದೆ ನಂದನ ಎಲ್ಲಿದೆ ಬಂಧನ
ಎಲ್ಲಾ ಇವೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಗೆಗೆ
ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆ ಎಂಬುದು
ನಾಲ್ಕು ದಿನದ ಈ ಬದುಕಿನಲಿ
ಎಲ್ಲೋ ಹುಡುಕಿದೆ ಇಲ್ಲದ ದೇವರ [Ello Hudukide Illada]
Reviewed by RK
on
ಆಗಸ್ಟ್ 13, 2021
Rating:
ಕಾಮೆಂಟ್‌ಗಳಿಲ್ಲ: