ರಚನೆ: ಕಯ್ಯಾರ ಕಿಯ್ಯಣ್ಣ ರೈ
ಏರುತಿಹುದು ಹಾರುತಿಹುದು
ನೋಡು ನಮ್ಮ ಬಾವುಟ
ತೋರುತಿಹುದು ಹೊಡೆದು ಹೊಡೆದು
ಬಾನಿನಗಲ ಪಟಪಟ
ಕೇಸರಿ ಬಿಳಿ ಹಸಿರು ಮೂರು
ಬಣ್ಣ ನಡುವೆ ಚಕ್ರವು
ಸತ್ಯ ಶಾಂತಿ ತ್ಯಾಗ ಮೂರ್ತಿ
ಗಾಂಧಿ ಹಿಡಿದ ಚರಕವು
ಇಂತ ಧ್ವಜವು ನಮ್ಮ ಧ್ವಜವು
ನೋಡು ಹಾರುತಿರುವುದು
ಧ್ವಜದ ಶಕ್ತಿ ನಮ್ಮ ಭಕ್ತಿ
ನಾಡ ಸಿರಿಯ ಮೆರೆವುದು
ಕೆಂಪು ಕಿರಣ ತುಂಬಿ ಗಗನ
ಹೊನ್ನ ಬಣ್ಣವಾಗಿದೆ
ನಮ್ಮ ನಾಡ ಗುಡಿಯ ಬಣ್ಣ
ನೋಡಿರಣ್ಣ ಹೇಗಿದೆ
ಏರುತಿಹುದು ಹಾರುತಿಹುದು
ನೋಡು ನಮ್ಮ ಬಾವುಟ
ತೋರುತಿಹುದು ಹೊಡೆದು ಹೊಡೆದು
ಬಾನಿನಗಲ ಪಟಪಟ
ಕೇಸರಿ ಬಿಳಿ ಹಸಿರು ಮೂರು
ಬಣ್ಣ ನಡುವೆ ಚಕ್ರವು
ಸತ್ಯ ಶಾಂತಿ ತ್ಯಾಗ ಮೂರ್ತಿ
ಗಾಂಧಿ ಹಿಡಿದ ಚರಕವು
ಇಂತ ಧ್ವಜವು ನಮ್ಮ ಧ್ವಜವು
ನೋಡು ಹಾರುತಿರುವುದು
ಧ್ವಜದ ಶಕ್ತಿ ನಮ್ಮ ಭಕ್ತಿ
ನಾಡ ಸಿರಿಯ ಮೆರೆವುದು
ಕೆಂಪು ಕಿರಣ ತುಂಬಿ ಗಗನ
ಹೊನ್ನ ಬಣ್ಣವಾಗಿದೆ
ನಮ್ಮ ನಾಡ ಗುಡಿಯ ಬಣ್ಣ
ನೋಡಿರಣ್ಣ ಹೇಗಿದೆ
ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ [Erutihudu Haarutihudu Nodu Namma Baavuta]
Reviewed by RK
on
ಆಗಸ್ಟ್ 13, 2021
Rating:
ಒಳ್ಳೆಯ ಕವನ. 🙏
ಪ್ರತ್ಯುತ್ತರಅಳಿಸಿಆದರೆ ಅದು ಗಾಂಧಿ ಹಿಡಿದ ಚಕ್ರ ಅಥವಾ ಚರಕವಲ್ಲ!
ನಮಸ್ಕಾರ