ಕುರುಡು ಕಾಂಚಾಣ ಕುಣಿಯುತ್ತಲಿತ್ತು [Kurudu Kanchana kuniyuttalittu]

ರಚನೆ : ದ. ರಾ. ಬೇಂದ್ರೆ

ಕುರುಡು ಕಾಂಚಾಣ ಕುಣಿಯುತ್ತಲಿತ್ತು!
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ ||
ಕುರುಡು ಕಾಂಚಾಣ || ಪಲ್ಲವಿ ||

ಬಾಣಂತಿಯೆಲುಬ ಸಾ-
ಬಾಣದ ಬಿಳುಪಿನಾ
ಕಾಣದ ಕಿರುಗೆಜ್ಜಿ ಕಾಲಾಗ ಇತ್ತೋ;
ಸಣ್ಣ ಕಂದಮ್ಮಗಳ
ಕಣ್ಣೀನ ಕವಡೀಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ;

ಬಡವರ ಒಡಲಿನ
ಬಡಬಾsನಲದಲ್ಲಿ
ಸುಡು ಸುಡು ಪಂಜು ಕೈಯೊಳಗಿತ್ತೋ;
ಕಂಬನಿ ಕುಡಿಯುವ
ಹುಂಬ ಬಾಯಿಲೆ ಮೈ -
ದುಂಬಿಯಂತುಧೋ ಉಧೋ ಎನ್ನುತಲಿತ್ತೋ.

ಕೂಲಿ ಕುಂಬಳಿಯವರ
ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯಯೊಳಗಿತ್ತೋ;
ಗುಡಿಯೊಳಗೆ ಗಣಣ, ಮಾ -
ಹಡಿಯೊಳಗ ತನನ, ಅಂ -
ಗಡಿಯೊಳಗೆ ಝಣಣಣ ನುಡಿಗೊಡುತಿತ್ತೋ.

ಹ್ಯಾಂಗಾರೆ ಕುಣಿಕುಣಿದು
ಮಂಗಾಟ ನಡೆದಾಗ
ಅಂಗಾತ ಬಿತ್ತೋ, ಹೆಗಲಲಿ ಎತ್ತೋ.
ಕುರುಡು ಕಾಂಚಾಣ ಕುಣಿಯುತ್ತಲಿತ್ತು [Kurudu Kanchana kuniyuttalittu] ಕುರುಡು ಕಾಂಚಾಣ ಕುಣಿಯುತ್ತಲಿತ್ತು [Kurudu Kanchana kuniyuttalittu] Reviewed by RK on ಆಗಸ್ಟ್ 13, 2021 Rating: 5

ಕಾಮೆಂಟ್‌ಗಳಿಲ್ಲ:

Submit Your Joke

ಹೆಸರು

ಇಮೇಲ್ *

ಸಂದೇಶ *

Blogger ನಿಂದ ಸಾಮರ್ಥ್ಯಹೊಂದಿದೆ.