ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು [Udayavagali Namma Cheluva Kannada Nadu]

ರಚನೆ: ಹುಲಿಯಗೋಳ ನಾರಾಯಣ ರಾವ್

ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||

ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು.

ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು.

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು.
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು [Udayavagali Namma Cheluva Kannada Nadu] ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು [Udayavagali Namma Cheluva Kannada Nadu] Reviewed by RK on ಆಗಸ್ಟ್ 13, 2021 Rating: 5

ಕಾಮೆಂಟ್‌ಗಳಿಲ್ಲ:

Submit Your Joke

ಹೆಸರು

ಇಮೇಲ್ *

ಸಂದೇಶ *

Blogger ನಿಂದ ಸಾಮರ್ಥ್ಯಹೊಂದಿದೆ.